Saturday, June 6, 2026
Homeಕರಾವಳಿಸುಳ್ಯ; ಹಿಂದೂ‌ ವಿದ್ಯಾರ್ಥಿನಿ‌ ಜೊತೆ‌ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ‌ ಪ್ರಕರಣ: 7 ಜನರ ವಿರುದ್ಧ ಪ್ರಕರಣ...

ಸುಳ್ಯ; ಹಿಂದೂ‌ ವಿದ್ಯಾರ್ಥಿನಿ‌ ಜೊತೆ‌ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ‌ ಪ್ರಕರಣ: 7 ಜನರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ಹಿಂದೂ‌ ವಿದ್ಯಾರ್ಥಿನಿ‌ ಜೊತೆ‌ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ‌  ಮಾಡಿದ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನ ಏಳು ಜನರ ವಿರುದ್ಧ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿ ಸನೀಫ್ ಸುಳ್ಯ ತಾಲೂಕು ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಪದವಿಯನ್ನು ಓದುತ್ತಿದ್ದು, ಅದೇ ಕಾಲೇಜಿನ ಯುವತಿಯೋರ್ವಳು ಆತನ ಸ್ನೇಹಿತೆಯಾಗಿದ್ದು, ಅವಳ ಒಟ್ಟಿಗೆ ಮಾತನಾಡುವುದನ್ನು ಕೆಲವರಿಗೆ ಇಷ್ಟವಿಲ್ಲದ ಕಾರಣ ಆ. 30 ರಂದು ಸನೀಫ್ ಕ್ಲಾಸ್ ರೂಂ ನಲ್ಲಿರುವಾಗ ಅದೇ ಕಾಲೇಜಿನಲ್ಲಿ ಓದುತ್ತಿದ್ದ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿಗಳಾದ ದೀಕ್ಷಿತ್ ಮತ್ತು ಧನುಷ್ ಎಂಬವರು ಕ್ಲಾಸ್ ನಿಂದ ಆತನನ್ನು ಮಾತನಾಡಲಿದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆದುಕೊಂಡು ಹೋಗಿ ಅಲ್ಲೇ ಇದ್ದ ಅದೇ ಕಾಲೇಜಿನ ಇತರ ವಿದ್ಯಾರ್ಥಿಗಳಾದ ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್ ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಮತ್ತು ಇತರರು ಕಾಲರ್ ಪಟ್ಟಿ ಹಿಡಿದು ನೀನು ಯುವತಿಯ ಒಟ್ಟಿಗೆ ಯಾಕೆ ಮಾತನಾಡುತ್ತಿಯಾ..!!? ಎಂದು ಹೇಳುತ್ತಾ ಅವರ ಕೈಯಲ್ಲಿದ್ದ ದೊಣ್ಣೆಯಿಂದ ಸನೀಫ್ ಬೆನ್ನಿಗೆ ಹೊಡೆದು ನೆಲಕ್ಕೆ ದೂಡಿಹಾಕಿ ಕಾಲಿನಿಂದ ತುಳಿದು ಇನ್ನೂ ಮುಂದಕ್ಕೆ ಯುವತಿಯೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!