- Advertisement -
![]()
- Advertisement -
ಉಡುಪಿ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದ ತೊಟ್ಲಗುರಿ ಎಂಬಲ್ಲಿ ನಡೆದಿದೆ.
ತೊಟ್ಲಗುರಿ ನಿವಾಸಿ ರಮೇಶ್ (40) ಮೃತ ದುರ್ದೈವಿ. ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಚಿಂತೆಯಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


