Friday, June 5, 2026
Homeಕರಾವಳಿಉಡುಪಿಉಡುಪಿ: ಮುರುಘಾಶ್ರೀ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಉಡುಪಿ: ಮುರುಘಾಶ್ರೀ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

- Advertisement -
- Advertisement -

ಉಡುಪಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.  ದಲಿತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯಕ್ಕಾಗಿ ಎಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆದ್ರಿಂದ ತಕ್ಷಣವೇ ಮುರುಘಾಶ್ರೀಗಳನ್ನು ಬಂಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಸುಂದರ್ ಮಾಸ್ಟರ್ ಒತ್ತಾಯಿಸಿದ್ದಾರೆ.

ಈ ಪ್ರಕರಣಗಳಲ್ಲಿ ಕೇಸು ದಾಖಲಾದ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕಾಗಿತ್ತು. ಆದರೆ ಗೃಹ ಸಚಿವರೇ ಆರೋಪಿ ನಿರಪರಾಧಿ ಎಂಬ ಅರ್ಥದಲ್ಲಿ ಹೇಳಿಕೆ ನೀಡಿ ಪೊಲೀಸ್ ಇಲಾಖೆ ನಿಷ್ಪಕ್ಷವಾಗಿ ಕರ್ತವ್ಯ ನಿರ್ವಹಿಸದಂತೆ ಮಾಡಿರುವುದನ್ನು ಸುಂದರ್ ಮಾಸ್ಟರ್ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

Latest News

error: Content is protected !!