ಮಂಗಳೂರು: ಮೀನುಗಾರರ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಪ್ರಯತ್ನಪಟ್ಟಿದೆ. ‘ಕ್ರೂಸ್ ಟೂರಿಸಂ’ಗೆ ನವಮಂಗಳೂರು ಬಂದರು ಸೂಕ್ತವಾಗಿದೆ. ಕರಾವಳಿ ಪ್ರದೇಶಗಳ ಆಮೂಲಾಗ್ರ ಪುನಶ್ಚೇತನಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ರು.
ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಮಂಗಳೂರಿನಲ್ಲಿ 3800 ಕೋಟಿ ರೂ. ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ, ಭೂಮಿಪೂಜೆ ಆಗಿದೆ. ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಕರ್ನಾಟಕದ ರೈತರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ಪಾದನಾ ಕ್ಷೇತ್ರ, ಮೇಕ್ ಇನ್ ಇಂಡಿಯಾ ಅಗತ್ಯ ಇದೆ. ಎಂಟು ವರ್ಷಗಳಲ್ಲಿ ದೇಶದ ಮೂಲಸೌಕರ್ಯದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಭಾರತಮಾಲಾ ಯೋಜನೆಯಲ್ಲಿ ರಸ್ತೆ ನಿರ್ಮಾಣ, ಕರಾವಳಿ ಮೂಲ ಸೌಕರ್ಯಕ್ಕೆ ಸಾಗರಮಾಲಾ ಶಕ್ತಿ ನೀಡಿದೆ. ದೇಶದ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ ಎಂದು ಹೇಳಿದ್ರು


