Thursday, June 4, 2026
Homeಕರಾವಳಿಭೂಗತ ಪಾತಕಿ ರವಿ ಪೂಜಾರಿ ಸಹಾಯಕ ಸಿಸಿಬಿ ವಶಕ್ಕೆ

ಭೂಗತ ಪಾತಕಿ ರವಿ ಪೂಜಾರಿ ಸಹಾಯಕ ಸಿಸಿಬಿ ವಶಕ್ಕೆ

- Advertisement -
- Advertisement -

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಆತನಿಗೆ ಸಹಾಯ ಮಾಡಿದ್ದ ಮತ್ತೋರ್ವನನ್ನು ಬಂಧಿಸಿದ್ದಾರೆ. ಗುಲಾಮ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ, ಸುಲಿಗೆಗೆ ನೆರವು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಗುಲಾಮ್ ನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

26ಕ್ಕೂ ಹೆಚ್ಚು ವರ್ಷ ಭೂಗತ ಜಗತ್ತು ಆಳಿದ ಗ್ಯಾಂಗ್​ಸ್ಟರ್ ರವಿ ಪೂಜಾರಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ. ಈತನ ವಿರುದ್ಧ ಬೆಂಗಳೂರಿನಲ್ಲೇ 46 ಎಫ್​ಐಆರ್ ದಾಖಲಾಗಿದ್ದು, ಇದರಲ್ಲಿ ಕೊಲೆ, ಕೊಲೆಯತ್ನ, ಸುಲಿಗೆ, ಹಪ್ತಾ ವಸೂಲಿ, ಬೆದರಿಕೆಯಂತಹ 20 ಪ್ರಕರಣಗಳಾದರೆ, ಇನ್ನುಳಿದ 26 ಕೇಸ್​ಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅಪರಾಧ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ

- Advertisement -

Latest News

error: Content is protected !!