Sunday, June 7, 2026
Homeಕರಾವಳಿಕಡಬ:  ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಕಡಬ:  ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಕಡಬ:  ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿ ನಡಿದಿದೆ. ಕಡಬ ತಾಲೂಕಿನ ಇಚ್ಲಂಪಾಡಿಯ   ಉರೇಜಾಲ್ ನಿವಾಸಿ ಫಿಲಿಪ್ ಟಿ.ಎಮ್(52.ವ) ಮೃತ ದುರ್ದೈವಿ.

ಫಿಲಿಪ್ ತಮ್ಮ ಮನೆಯ ತೋಟದಲ್ಲಿ ಆ.28ರಂದು  ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು  ಮಂಗಳೂರಿಗೆ  ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿ ಇದ್ದ ಅವರು ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ . ಈ ಬಗ್ಗೆ  ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!