Wednesday, June 24, 2026
Homeಕ್ರೀಡೆಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ: 1 ದಿನ ಯುವ ಕ್ರೀಡಾಧಿಕಾರಿಯಾಗಲು 18...

ಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ: 1 ದಿನ ಯುವ ಕ್ರೀಡಾಧಿಕಾರಿಯಾಗಲು 18 ರಿಂದ 23 ವರ್ಷದೊಳಗಿನ ಯುವತಿಯರಿಗೆ ಅವಕಾಶ

- Advertisement -
- Advertisement -

ಬೆಂಗಳೂರು: ಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಹಿನ್ನೆಲೆಯಲ್ಲಿ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಯುವತಿಯರಿಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

18 ವರ್ಷದಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಅವಕಾಶ ನೀಡಲಾಗುತ್ತಿದ್ದು,‌ ಒಂದು ದಿನ ಯುವ ಕ್ರೀಡಾ ಅಧಿಕಾರಿಯಾಗಿ ಅನುಭವ ಪಡೆಯಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ ಆಹ್ವಾನಿಸಲಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ/ಉಪ ನಿರ್ದೇಶಕರ ಕಾರ್ಯ ವೈಖರಿಯನ್ನು ಪರಿಚಯಿಸಲು ಅವಕಾಶ ಕೊಡಲಾಗುತ್ತಿದ್ದು, ಎಲ್ಲಾ ಜಿಲ್ಲೆಗಳ ಸಹಾಯಕ ಉಪ ನಿರ್ದೇಶಕರ ಜೊತೆಯಲ್ಲಿ ಒಂದು ದಿನ ಕಾರ್ಯನಿರ್ವಹಿಸಲು ಅವಕಾಶ ಸಿಗಲಿದೆ.

ಆಸಕ್ತ ಯುವತಿಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 25 ರವರೆಗೂ ಕಾಲಾವಕಾಶ ನೀಡಲಾಗಿದೆ.

ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಅರ್ಹ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

- Advertisement -

Latest News

error: Content is protected !!