Saturday, June 6, 2026
Homeಕೊಡಗುಕೆಎಸ್ಸಾರ್ಟಿಸಿ ಬಸ್ ಅಪಘಾತ, 21 ಪ್ರಯಾಣಿಕರಿಗೆ ಗಾಯ

ಕೆಎಸ್ಸಾರ್ಟಿಸಿ ಬಸ್ ಅಪಘಾತ, 21 ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಮಡಿಕೇರಿ : ಕೆಎಸ್ಸಾರ್ಟಿಸಿ ಬಸ್ ಅಪಘಾತವಾಗಿ 21 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಡಿಕೇರಿಯ ಬೋಯಿಕೇರಿ ತಿರುವಿನಲ್ಲಿ ನಡೆದಿದೆ.

ಮೈಸೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ ಗೆ ಬೋಯಿಕೇರಿ ತಿರುವಿನಲ್ಲಿ ಮಡಿಕೇರಿ ಕಡೆ ಬರುತ್ತಿದ್ದ ಬೈಕ್‌ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಬೈಕ್ ಸವಾರ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!