Thursday, June 4, 2026
Homeಕರಾವಳಿಧರ್ಮಸ್ಥಳ : ಕನ್ಯಾಡಿಯ ಯುವಕ ಕೌಶಿಕ್ ಮನೆಯಿಂದ ನಾಪತ್ತೆ: ಸುಳಿವು ಸಿಕ್ಕಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಲು...

ಧರ್ಮಸ್ಥಳ : ಕನ್ಯಾಡಿಯ ಯುವಕ ಕೌಶಿಕ್ ಮನೆಯಿಂದ ನಾಪತ್ತೆ: ಸುಳಿವು ಸಿಕ್ಕಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಲು ಮನವಿ

- Advertisement -
- Advertisement -

ಬೆಳ್ತಂಗಡಿ : ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಲುಕ್ ಔಟ್ ನೋಟೀಸ್/ಪ್ರಕಟಣೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆಯ ಮುರಳೀಧರ್ ಎಂಬವರ ಮಗನಾದ ಕೌಶಿಕ್.ಕೆ(21) ಕಳೆದ ವಾರ ಮನೆಯಿಂದ ಏಕಾಏಕಿ  ನಾಪತ್ತೆಯಾಗಿದ್ದಾನೆ. ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿಲ್ಲ ಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ತಂದೆ‌‌ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

ಕೌಶಿಕ್ ಮಂಗಳೂರಿನ ಕೆ.ಪಿ.ಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಮನೆಯಿಂದ ಮಂಗಳೂರಿಗೆ ಕಾಲೇಜಿಗೆ ಹೋಗಿ ಬರುತ್ತಿದ್ದ.ಕೌಶಿಕ್ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಲು ಲುಕ್ ಔಟ್ ನೋಟೀಸ್ ಪ್ರಕಟಣೆ ಹೊರಡಿಸಿದ್ದಾರೆ.

- Advertisement -

Latest News

error: Content is protected !!