Sunday, June 7, 2026
Homeತಾಜಾ ಸುದ್ದಿತಮ್ಮ ವಿರುದ್ಧ ಮಹಿಳೆಯರ ಆರೋಪದ ಆಡಿಯೋ ವೈರಲ್ ; ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ

ತಮ್ಮ ವಿರುದ್ಧ ಮಹಿಳೆಯರ ಆರೋಪದ ಆಡಿಯೋ ವೈರಲ್ ; ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ

- Advertisement -
- Advertisement -

ಬೆಳಗಾವಿ: ತಮ್ಮ ವಿರುದ್ಧ ಮಹಿಳೆಯರ ಆರೋಪದ ಆಡಿಯೋ ವೈರಲ್ ಆಗುತ್ತಿದ್ದಂತೆ ಸ್ವಾಮೀಜಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ ಬಸವ ಸಿದ್ದಲಿಂಗಶ್ರೀಗಳು ಮಠದ ತಮ್ಮ ಕೊಠಡಿಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

ಇಬ್ಬರು ಮಹಿಳೆಯರು ಸ್ವಾಮೀಜಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದರು. ಮಹಿಳೆಯರೊಂದಿಗೆ ಅವರ ವರ್ತನೆ ಸರಿಯಿಲ್ಲ ಎಂದು ಇಬ್ಬರು ಮಹಿಳೆಯರು ಮಾತನಾಡುತ್ತಿರುವ ಆಡಿಯೋ ಕಳೆದ ಒಂದು ವಾರದಿಂದ ವೈರಲ್ ಆಗಿತ್ತು. ಇದರಿಂದ ಸ್ವಾಮೀಜಿ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಇದೀಗ ಇದೇ ಕಾರಣಕ್ಕೆ ಬಸವ ಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬೈಲಹೊಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದ್ದಾರೆ.

- Advertisement -

Latest News

error: Content is protected !!