Saturday, June 6, 2026
Homeತಾಜಾ ಸುದ್ದಿಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದವರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದವರ ಬಂಧನ

- Advertisement -
- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದವರನ್ನು ಬಂಧಿಸಿದ್ದಾರೆ. ನಿನ್ನೆ ಮತ್ತು ಇಂದು ಎರಡು ಪ್ರಕರಣಗಳಲ್ಲಿ ಒಟ್ಟು 55.39 ಲ.ರೂ. ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಂಡಿದ್ದಾರೆ.

ಸೋಮವಾರ ದುಬೈನಿಂದ ಬಂದಿದ್ದ ಮೂವರು ಚಪ್ಪಲಿ ಮತ್ತು ಬನಿಯನ್‌ನಲ್ಲಿ ಪೇಸ್ಟ್‌ ರೂಪದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದರು.

ಮತ್ತೊಂದು ಪ್ರಕರಣದಲ್ಲಿ ಇಂದು ದುಬೈನಿಂದ ಬಂದಿದ್ದ ಕಾಸರಗೋಡಿನ ವ್ಯಕ್ತಿ 9.74 ಲಕ್ಷ ರೂ ಮೌಲ್ಯದ 190.250 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!