Sunday, June 7, 2026
Homeಕರಾವಳಿಉಡುಪಿಉಡುಪಿ: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ

ಉಡುಪಿ: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ

- Advertisement -
- Advertisement -

ಉಡುಪಿ: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದ ಆರೋಪಿಗೆ ಜೀವಿತಾವಾಧಿ ಕಾರಾಗೃಹ ಶಿಕ್ಷೆ ಸಹಿತ ಇತರೆ ಪ್ರಕರಣಗಳಿಗೂ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಮಹತ್ವದ ಆದೇಶವನ್ನು ನೀಡಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹನುಮಂತ ಬಸಪ್ಪ ಕಂಬಳಿ (42) ಎಂಬಾತ ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದಿದ್ದ. ಈ ಪ್ರಕರಣ ಸಂಬಂಧ ಇಂದು ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದರು.

- Advertisement -

Latest News

error: Content is protected !!