Saturday, June 6, 2026
Homeಕರಾವಳಿಸುಳ್ಯ; ಐವರ್ನಾಡಿನಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ

ಸುಳ್ಯ; ಐವರ್ನಾಡಿನಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ

- Advertisement -
- Advertisement -

ಸುಳ್ಯ:  ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ  ಪರ್ಲಿಕಜೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ  ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಮೃತ ದುರ್ದೈವಿ.  ಇಂದು ಬೆಳಿಗ್ಗೆ ಸುಧಾಕರರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿತ್ತು.

ಸುಧಾಕರರು ಸ್ವಲ್ಪ ಅಸೌಖ್ಯಕ್ಕೀಡಾಗಿದ್ದ  ಹಿನ್ನಲೆ ಅವರಿಗೆ ಹೊರಗೆ ಓಡಲು ಸಾಧ್ಯವಾಗಲಿಲ್ಲ. ಸ್ಥಳದಲ್ಲಿಯೇ ಬೆಂಕಿಯಲ್ಲಿ ದಹಿಸಲ್ಪಟ್ಟು ಸಾವನ್ನಪ್ಪಿದರೆಂದು ತಿಳಿದು ಬಂದಿದೆ.  ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.  ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!