Sunday, June 7, 2026
Homeಕರಾವಳಿಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯ ಸೂಪರಿಂಟೆಂಡೆಂಟ್ ಕೊಡಗಿನಲ್ಲಿ ನೇಣಿಗೆ ಶರಣು

ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯ ಸೂಪರಿಂಟೆಂಡೆಂಟ್ ಕೊಡಗಿನಲ್ಲಿ ನೇಣಿಗೆ ಶರಣು

- Advertisement -
- Advertisement -

ಕೊಡಗು; ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯ ಸೂಪರಿಂಟೆಂಡೆಂಟ್ ಮಡಿಕೇರಿಯ ವಸತಿಗೃಹದಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಡಿಕೇರಿ ನಗರದ ಹಳೆಯ ಬಸ್ ನಿಲ್ದಾಣದ ಬಳಿಯ ಶ್ರೀ ಲಾಡ್ಜ್ ನಲ್ಲಿ ಘಟನೆ ನಡೆದಿದೆ.

ಮಂಗಳೂರು ಬಜ್ಪೆ ಮೂಲದ ಶಿವಾನಂದ(45) ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!