Thursday, June 4, 2026
Homeಕರಾವಳಿಮಂಗಳೂರು; ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ತಂದೆಗೆ 15 ವರ್ಷ ಕಠಿಣ ಶಿಕ್ಷೆ ವಿಧಿಸಿದ...

ಮಂಗಳೂರು; ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ತಂದೆಗೆ 15 ವರ್ಷ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್

- Advertisement -
- Advertisement -

ಮಂಗಳೂರು: ಅಪ್ರಾಪ್ತ ಮಗಳನ್ನೇ ಅತ್ಯಾಚಾರವೆಸಗಿದ ಪಾಪಿ ತಂದೆಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತಗತಿ -2) ನ್ಯಾಯಾಲಯವು 15 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.
ಕಾಮಿ ತಂದೆಯೊಬ್ಬ 2018ರ ಜನವರಿಯಲ್ಲಿ ಲಾಡ್ಜ್ ಮತ್ತು ಮನೆಯೊಂದರಲ್ಲಿ ತಂದೆಯಿಂದಲೇ ಅಪ್ರಾಪ್ತೆ ಮಗಳನ್ನು ಅತ್ಯಾಚಾರವೆಸಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ವೃತ್ತ ನಿರೀಕ್ಷಕ ಶರಣಗೌಡ ಹಾಗೂ ಟಿ.ಡಿ. ನಾಗರಾಜ್ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಪರಾಧಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಅವರು ವಾದ ಮಂಡಿಸಿದ್ದರು.

- Advertisement -

Latest News

error: Content is protected !!