Monday, June 8, 2026
Homeಕರಾವಳಿಉಡುಪಿಕುಂದಾಪುರ: ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ: ಮನನೊಂದು ನಿನ್ನೆ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

ಕುಂದಾಪುರ: ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ: ಮನನೊಂದು ನಿನ್ನೆ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

- Advertisement -
- Advertisement -

ಕುಂದಾಪುರ: ನಿನ್ನೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಮೃತದೇಹ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು ,ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನಲೆಯಲ್ಲಿ ಈ ವಿದ್ಯಾರ್ಥಿ ಮನನೊಂದು ಹೇರಿಕುದ್ರು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆ ಬಳಿ ತನ್ನ ಸೈಕಲ್ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿದ್ದ.

ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶಿವಮೊಗ್ಗದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಯೀಶ್ ಶೆಟ್ಟಿ ನೀಟ್ ಪರೀಕ್ಷೆ ಬರೆದಿದ್ದ. ಫಲಿತಾಂಶ ನೋಡುವ ಸಲುವಾಗಿ ನಿನ್ನೆ ಬೆಳಿಗ್ಗೆ ಸೈಕಲ್ ತೆಗೆದುಕೊಂಡು ಸೈಬರ್ ಹೋಗಿದ್ದ ಸಾಯೀಶ್ ಗೆ 140 ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!