Friday, June 5, 2026
Homeಕರಾವಳಿಉಡುಪಿಕೋಟ: ಮನೆಯಲ್ಲಿದ್ದ 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಕಳ್ಳರು ಪರಾರಿ

ಕೋಟ: ಮನೆಯಲ್ಲಿದ್ದ 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಕಳ್ಳರು ಪರಾರಿ

- Advertisement -
- Advertisement -

ಕೋಟ: ಸಾಸ್ತಾನ ಪಾಂಡೇಶ್ವರದಲ್ಲಿ ಹಳೆಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ.

ಬ್ರಹ್ಮಾವರ ತಾಲೂಕಿನ ಸಾಸ್ತಾನ ನಿವಾಸಿ ರಾಜೇಶ್ ಪೂಜಾರಿ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಮದುವೆ ಕಾರ್ಯಕ್ರಮದ ಪ್ರಯುಕ್ತ ಬೆಂಗಳೂರಿನಿಂದ ಊರಿಗೆ ಬಂದಿದ್ದು, ಕಾರ್ಯಕ್ರಮ ಮುಗಿಸಿ ವಾಪಾಸು ಬೆಂಗಳೂರಿಗೆ ಹೋಗುವಾಗ ಸಾಸ್ತಾನದ ಪಾಂಡೇಶ್ವರದ ಮನೆಯ ಕಪಾಟಿನಲ್ಲಿ 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಇಟ್ಟು ಹೋಗಿದ್ದರು. ಕೊನೆಗೆ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಸಹೋದರನಿಂದ ತಿಳಿದುಬಂದಿದೆ.

ಘಟನೆ ಬಗ್ಗೆ ರಾಜೇಶ್ ಪೂಜಾರಿ ದೂರು ನೀಡಿದ್ದು,  ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

- Advertisement -

Latest News

error: Content is protected !!