Thursday, June 4, 2026
Homeತಾಜಾ ಸುದ್ದಿದ.ಕ. ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ: ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್‌ ತಡೆ

ದ.ಕ. ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ: ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್‌ ತಡೆ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಅದಕ್ಕೆ ತಡೆ ನೀಡುವಂತೆ ಮರಳುಗಾರರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಹೈಕೋರ್ಟ್‌ ಜಿಲ್ಲಾಧಿಕಾರಿ ಆದೇಶಕ್ಕೆ ತಡೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ನಿಷೇಧ ಮಾಡುವಂತೆ ಮೇ 22ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಆದೇಶ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ನದಿ ತಟದಲ್ಲಿರುವ ದೋಣಿ, ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ತೆರವುಗೊಳಿಸುವಂತೆ ಆದೇಶಿಸಲಾಗಿತ್ತು. ಅದೀಗ ಅಸಿಂಧುಗೊಂಡಿದೆ.

- Advertisement -

Latest News

error: Content is protected !!