ಬೆಂಗಳೂರು: ನಾಳೆ ನಟ ರಮೇಶ್ ಅರವಿಂದ್ ಅವರು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಹಿರಿಯ ನಟ ಅಭಿಮಾನಿಗಳಿಗೊಂದು ಬಂಪರ್ ಅವಕಾಶ ನೀಡಿದ್ದಾರೆ.
ರಮೇಶ್ ಅರವಿಂದ್ ಅವರಿಗೆ ಅಭಿಮಾನಿಗಳು ವಾಟ್ಸಪ್ ಸಂದೇಶ ಕಳಿಸುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಬಹುದು. ಅಲ್ಲದೇ, ಅವರಿಗೆ ಏನಾದರೂ ಪ್ರಶ್ನೆಗಳನ್ನೂ ಕೇಳಬಹುದು. ಅದಕ್ಕಾಗಿ ಅಭಿಮಾನಿಗಳಿಗಾಗಿ ಅವರು ಫೋನ್ ನಂಬರ್ ನೀಡಿದ್ದಾರೆ. ಆ ನಂಬರ್ಗೆ ವಾಟ್ಸಾಪ್ ಸಂದೇಶ ಕಳಿಸುವ ಮೂಲಕ ನೆಚ್ಚಿನ ನಟನಿಗೆ ಫ್ಯಾನ್ಸ್ ವಿಶ್ ಮಾಡಬಹುದು.
ಅಭಿಮಾನಿಗಳು 8951599009 ಮತ್ತು 8951699009 ಮೊಬೈಲ್ ಸಂಖ್ಯೆಗೆ ವಾಟ್ಸಪ್ ಸಂದೇಶ ಕಳಿಸುವ ಮೂಲಕ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಶುಭ ಹಾರೈಸಬಹುದು.ಬರೀ ವಿಶ್ ಮಾಡುವುದು ಮಾತ್ರವಲ್ಲದೇ ರಮೇಶ್ ಅರವಿಂದ್ ಅವರಿಗೆ ಏನಾದರೂ ಪ್ರಶ್ನೆಗಳನ್ನೂ ಕೇಳಬಹುದು. ಹೀಗೆ ಮೆಸೇಜ್ ಮಾಡುವಾಗ ನಿಮ್ಮ ಹೆಸರು, ಊರು ಮತ್ತು ಜಿಲ್ಲೆಯನ್ನು ತಪ್ಪದೇ ನಮೂದಿಸಿರಬೇಕು. ಮೆಸೇಜ್ ಮಾಡಿದ ಪ್ರತಿಯೊಬ್ಬರಿಗೂ ರಮೇಶ್ ಅರವಿಂದ್ ಅವರೇ ಸ್ವತಃ ಪ್ರತಿಕ್ರಿಯೆ ನೀಡಲಿದ್ದಾರೆ. ಎಲ್ಲರಿಗಿಂತ ವಿಭಿನ್ನವಾಗಿ ಶುಭಾಶಯ ತಿಳಿಸಿದವರಿಗೆ ಖುದ್ದಾಗಿ ರಮೇಶ್ ಅರವಿಂದ್ ಕರೆ ಮಾಡಿ ಮಾತನಾಡಲಿದ್ದಾರೆ ಎಂಬುದು ವಿಶೇಷ.