Thursday, June 4, 2026
Homeಕರಾವಳಿಇಂದು‌ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಿನ್ನೆಲೆ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ

ಇಂದು‌ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಿನ್ನೆಲೆ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ

- Advertisement -
- Advertisement -

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು. ಪೂಜೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ ಪಾಲ್ಗೊಂಡಿದ್ದರು.

ಅಲ್ಲದೇ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಹಾನಗರ ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಹಾಗೂ ಕ್ಷೇತ್ರದ ಟ್ರಸ್ಟಿ ರವಿಶಂಕರ್ ಮಿಜಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್ ಸಾಯಿರಾಮ್, ಕಾರ್ಯದರ್ಶಿ ಮಾಧವ ಸುವರ್ಣ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಟ್ರಸ್ಟಿಗಳಾದ ಶೇಖರ್ ಪೂಜಾರಿ ಮತ್ತು ಇತರರು ಉಪಸ್ಥಿತರಿದ್ದರು.

ನಾರಾಯಣ ಗುರುಗಳ ರಾಜ್ಯಮಟ್ಟದ ಜಯಂತಿ ಆಚರಣೆ ಇಂದು ಮಂಗಳೂರಿನಲ್ಲಿ ನಡೆಯುತ್ತಿದೆ.

- Advertisement -

Latest News

error: Content is protected !!