Wednesday, June 3, 2026
Homeಕರಾವಳಿಉಪ್ಪಿನಂಗಡಿ: ನೇಣು ಬಿಗಿದುಕೊಂಡು ವ್ಯಕ್ತಿ  ಆತ್ಮಹತ್ಯೆ

ಉಪ್ಪಿನಂಗಡಿ: ನೇಣು ಬಿಗಿದುಕೊಂಡು ವ್ಯಕ್ತಿ  ಆತ್ಮಹತ್ಯೆ

- Advertisement -
- Advertisement -

ಉಪ್ಪಿನಂಗಡಿ; ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯ  ಹಿರೇಬಂಡಾಡಿ ಗ್ರಾಮದ ಕಜೆಕ್ಕೋಡಿ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ಗ್ರಾಮದ ಅಚ್ಯುತ ಪೂಜಾರಿ (47) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಲಿ ಕೆಲಸ ಮಾಡುತ್ತಿದ್ದ ಇವರು ಮನೆ ಕಟ್ಟಲೆಂದು ಸಾಲ ಮಾಡಿದ್ದು, ಸಾಲ ತೀರಿಸಲಾಗದೆ ಬೇಸತ್ತು   ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಸಂದೇಹ ವ್ಯಕ್ತವಾಗಿದೆ.  ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!