Wednesday, June 3, 2026
Homeತಾಜಾ ಸುದ್ದಿಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ತನಿಖೆ ಶತಸಿದ್ಧ: ತಪ್ಪಿತಸ್ಥರನ್ನು ಒಳಗೆ ಕೂರಿಸ್ತೇವೆ: ನಳಿನ್‌

ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ತನಿಖೆ ಶತಸಿದ್ಧ: ತಪ್ಪಿತಸ್ಥರನ್ನು ಒಳಗೆ ಕೂರಿಸ್ತೇವೆ: ನಳಿನ್‌

- Advertisement -
- Advertisement -

ಮೈಸೂರು: ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನಡೆದ ಹಗರಣಗಳ ಬಗ್ಗೆ ತನಿಕೆ ನಡೆಸೋದು ಶತಸಿದ್ಧ. ಹಗರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಸೇರಿದಂತೆ ಸಿದ್ದರಾಮಯ್ಯ ಕಾಲದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದ್ದರು. ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ. ನಾಲ್ಕು ವರ್ಷದಿಂದ ಅದನ್ನು ತೆಗೆಯುವ ಕೆಲಸ ಮಾಡಿದ್ದೇವೆ ಎಂದರು.

- Advertisement -

Latest News

error: Content is protected !!