Saturday, June 13, 2026
Homeಕ್ರೀಡೆಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ

ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ

- Advertisement -
- Advertisement -

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಕೆ.ಎಲ್. ರಾಹುಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತಂಡದ ಸದಸ್ಯರಾಗಿ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯಾ, ಆರ್. ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಬಿ. ಕುಮಾರ್, ಹರ್ಷಲ್ ಪಟೇಲ್ ಮತ್ತು ಅರ್ಶ್ ದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್ 16 ರಿಂದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ‌ ಆರಂಭವಾಗಲಿದ್ದು, ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಆಡಲಿದೆ.

- Advertisement -

Latest News

error: Content is protected !!