Tuesday, June 9, 2026
Homeಕರಾವಳಿಉಡುಪಿಉಡುಪಿ: ಕೊರಗ ಜನಾಂಗದವರ ವೈದ್ಯಕೀಯ ವೆಚ್ಚ ಮರುಪಾವತಿಗೆ ಆಗ್ರಹ: ಸಿಎಂಗೆ ಮನವಿ ಸಲ್ಲಿಸಿದ ಕರಾವಳಿ ಶಾಸಕರ...

ಉಡುಪಿ: ಕೊರಗ ಜನಾಂಗದವರ ವೈದ್ಯಕೀಯ ವೆಚ್ಚ ಮರುಪಾವತಿಗೆ ಆಗ್ರಹ: ಸಿಎಂಗೆ ಮನವಿ ಸಲ್ಲಿಸಿದ ಕರಾವಳಿ ಶಾಸಕರ ನಿಯೋಗ

- Advertisement -
- Advertisement -

ಉಡುಪಿ: ಕೊರಗ ಜನಾಂಗದ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆ ಸರ್ಕಾರವೇ ಮರುಪಾವತಿಸಬೇಕು ಎಂದು ಆಗ್ರಹಿಸಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.

ಆರ್ಥಿಕವಾಗಿ ಹಿಂದುಳಿದ ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಮನವಿ ಮಾಡಿಕೊಂಡರು.

ಶಾಸಕರ ನಿಯೋಗದ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈದ್ಯಕೀಯ ವೆಚ್ಚ ಮರುಪಾವತಿ ಮುಂದುವರೆಸಿ ತಕ್ಷಣದಲ್ಲಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ದೂರವಾಣಿ ಕರೆ ಮೂಲಕ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!