Saturday, August 29, 2026
Homeತಾಜಾ ಸುದ್ದಿತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳಿಸಿಕೊಡ್ತೇವೆ: ನಾನು ಯಾವುದಕ್ಕೂ ಹೆದರುವವನಲ್ಲ: ಡಿಕೆಶಿ

ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳಿಸಿಕೊಡ್ತೇವೆ: ನಾನು ಯಾವುದಕ್ಕೂ ಹೆದರುವವನಲ್ಲ: ಡಿಕೆಶಿ

- Advertisement -
- Advertisement -

ಮೈಸೂರು: ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ‌ ಬಗ್ಗೆ ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹಾ ಕಳುಹಿಸಿಕೊಡುತ್ತೇವೆ. ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ. ನಾನು ಯಾವುದಕ್ಕೂ ಹೆದರುವವನಲ್ಲ. ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದು ಡಿಕೆಶಿ ಹೇಳಿದ್ದಾರೆ.

- Advertisement -

Latest News

error: Content is protected !!