Saturday, June 6, 2026
Homeಕರಾವಳಿ2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ ಸುನೀಲ್ ಕುಮಾರ್ ಅಧ್ಯಕ್ಷತೆಯ ಆಯ್ಕೆ ಸಲಹಾ ಸಮಿತಿ ರಚನೆ:...

2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ ಸುನೀಲ್ ಕುಮಾರ್ ಅಧ್ಯಕ್ಷತೆಯ ಆಯ್ಕೆ ಸಲಹಾ ಸಮಿತಿ ರಚನೆ: ಸಮಿತಿ ಸದಸ್ಯರಾಗಿ ಡಾ. ಮೋಹನ್ ಆಳ್ವ ನೇಮಕ

- Advertisement -
- Advertisement -

ಬೆಂಗಳೂರು: 2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಗೆ ರಾಜ್ಯಮಟ್ಟದ ಸಲಹಾ ಸಮಿತಿ ರಚಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅಧ್ಯಕ್ಷತೆಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಿತಿಗೆ ವಿವಿಧ ಕ್ಷೇತ್ರಗಳಿಂದ ಮೂವತ್ತು ಗಣ್ಯರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದ್ದು, ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಿಂದ ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ನಾಲ್ಕು ಪದನಿಮಿತ್ತ ಸದಸ್ಯರ ಪೈಕಿ ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರು ಸಮಿತಿಯ ಭಾಗವಾಗಿದ್ದಾರೆ.

- Advertisement -

Latest News

error: Content is protected !!