Thursday, June 25, 2026
Homeಕರಾವಳಿಫಾಝಿಲ್ ಮತ್ತು ಮಸೂದ್ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆ: ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಪ್ರತಿಭಟನೆ

ಫಾಝಿಲ್ ಮತ್ತು ಮಸೂದ್ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆ: ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಸುರತ್ಕಲ್ ನ ಫಾಝೀಲ್ ಮತ್ತು ಬೆಳ್ಳಾರೆಯ ಮಸೂದ್ ಕೊಲೆ ಪ್ರಕರಣದಲ್ಲಿ ತಾರತಮ್ಯ ಆರೋಪ ಹಿನ್ನೆಲೆಯಲ್ಲಿ
ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಪ್ರತಿಭಟನೆ‌ ನಡೆದಿದೆ. ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ‌ ನಡೆಸಲಾಗಿದ್ದು, ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಸೂದ್ ಮತ್ತು ಫಾಝೀಲ್ ಮನೆಗೆ ರಾಜ್ಯ ಸರ್ಕಾರ ಭೇಟಿ ನೀಡಿಲ್ಲ,‌ ಪ್ರವೀಣ್ ನೆಟ್ಟಾರು ಕೊಲೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದ್ದು, ಸಿಎಂ ಕೂಡಾ ಭೇಟಿ ಕೊಟ್ಟಿದ್ದಾರೆ. ಆದರೆ ಮಸೂದ್ ಮತ್ತು ಫಾಝೀಲ್ ಗೆ ಪರಿಹಾರ ನೀಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಪ್ರತಿಭಟನೆ ಹಿನ್ನೆಲೆಯಲ್ಲಿ ಕ್ಲಾಕ್ ಟವರ್ ರೋಡ್ ಸಂಪೂರ್ಣ ಬಂದ್ ಆಗಿತ್ತಲ್ಲದೇ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

- Advertisement -

Latest News

error: Content is protected !!