Saturday, June 6, 2026
Homeತಾಜಾ ಸುದ್ದಿಬೆಳೆಹಾನಿ ಪರಿಹಾರವಾಗಿ ಒಂದು ವಾರದಲ್ಲಿ 300 ಕೋಟಿ ರೂ.ಹಣ ಬಿಡುಗಡೆ: ಸಿಎಂ

ಬೆಳೆಹಾನಿ ಪರಿಹಾರವಾಗಿ ಒಂದು ವಾರದಲ್ಲಿ 300 ಕೋಟಿ ರೂ.ಹಣ ಬಿಡುಗಡೆ: ಸಿಎಂ

- Advertisement -
- Advertisement -

ಕಲಬುರ್ಗಿ: ಕಳೆದ ಜುಲೈ-ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಯಿಂದ ರಾಜ್ಯದಲ್ಲಿ ಬಹಳಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಲ್ಲಿ 300 ಕೋಟಿ ರೂ. ಗಳಿಗೂ ಹೆಚ್ಚು ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದುಕೊಂಡು ತಕ್ಷಣ ಪರಿಹಾರ ನೀಡಲಾಗುತ್ತಿದೆ. ಹಿಂದೆಲ್ಲ ಪರಿಹಾರ ನೀಡಲು ವರ್ಷಗಟ್ಟಲೆ ಬೇಕಾಗುತ್ತಿತ್ತು. ಇದೀಗ ಫ್ರೂಟ್ಸ್ ತಂತ್ರಾಂಶದಲ್ಲಿ ನಷ್ಟದ ಮಾಹಿತಿ ನಮೂದಿಸಿದ ಕೂಡಲೆ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.

- Advertisement -

Latest News

error: Content is protected !!