Thursday, June 4, 2026
Homeತಾಜಾ ಸುದ್ದಿಸಿಗದ ಜಾಮೀನು,ಮುರುಘಾಶ್ರೀಗಳಿಗೆ ಇಂದೂ ನಿರಾಸೆ

ಸಿಗದ ಜಾಮೀನು,ಮುರುಘಾಶ್ರೀಗಳಿಗೆ ಇಂದೂ ನಿರಾಸೆ

- Advertisement -
- Advertisement -

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿಸಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಮುರುಘಾಶ್ರೀಗಳಿಗೆ ಇಂದೂ ನಿರಾಸೆಯಾಗಿದೆ.ಶ್ರೀಗಳ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಅವರಿಗೆ ಇಂದು ಜಾಮೀನು ದೊರೆಯದೇ ಜೈಲೇ ಗತಿ ಎನ್ನುವಂತೆ ಆಗಿದೆ.

ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧನದಲ್ಲಿರುವಂತ ಸ್ವಾಮೀಜಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗಾಗಿ ಅವರ ಪರ ವಕೀಲರು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಕೂಡ ಮುರುಘಾ ಶ್ರೀಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠವು, ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಇನ್ನೂ ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವಂತ 4ನೇ ಆರೋಪಿ ಪರಮಶಿವಯ್ಯ ಹಾಗೂ 5ನೇ ಆರೋಪಿ ಗಂಗಾಧರ್ ಅವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 21ಕ್ಕೆ ಚಿತ್ರದುರ್ಗದ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದೂಡಿಕೆ ಮಾಡಿದೆ.

- Advertisement -

Latest News

error: Content is protected !!