Monday, June 15, 2026
Homeಕರಾವಳಿ21 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಶ್ರೀಧರ.ಎಚ್.ಜಿ. ಆಯ್ಕೆ

21 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಶ್ರೀಧರ.ಎಚ್.ಜಿ. ಆಯ್ಕೆ

- Advertisement -
- Advertisement -

ಪುತ್ತೂರು: 21 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ. ಶ್ರೀಧರ.ಎಚ್.ಜಿ. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಘೋಷಿಸಿದ್ದಾರೆ.

ಡಾ. ಶ್ರೀಧರ್ ಅವರು ಕನ್ನಡ ಉಪನ್ಯಾಸಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ, ಕನ್ನಡ ಸಂಘದ ಕೆಲಸಗಳಲ್ಲಿ ಸಕ್ರಿಯವಾಗಿದ್ದು, ಸುಮಾರು 30 ಕ್ಕೂ ಹೆಚ್ಚು ಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿ ಚಿತ್ರಣಗಳನ್ನು, ಹಲವು ಕೃತಿಗಳನ್ನು ಸಂಪಾದಿಸಿದ್ದು ಕಳೆದ 5 ವರ್ಷಗಳ ಅವಧಿಗೆ ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುವುದು ಪ್ರಶಂಸನೀಯ. ಪುತ್ತೂರಿನ ಹಿರಿಯ ಸಾಹಿತಿಗಳು, ಸಂಘಟಕರು ಸೇರಿದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.

- Advertisement -

Latest News

error: Content is protected !!