Saturday, June 6, 2026
Homeತಾಜಾ ಸುದ್ದಿಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪಿಣರಾಯಿ ವಿಜಯನ್ ಮತ್ತು ಬಸವರಾಜ ಬೊಮ್ಮಾಯಿ ಭೇಟಿ ನಡೆದಿದೆ.

ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿನ ಮಹತ್ವದ ರೈಲ್ವೇ ಯೋಜನೆಗಳ ಬಗ್ಗೆ ಚರ್ಚೆ ನಡೆದಿದ್ದು, ತಲಶ್ಶೇರಿ–ಮೈಸೂರು ಹಾಗೂ ನೀಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಉಭಯ ನಾಯಕರಿಂದ ಸಭೆಯಲ್ಲಿ ಚರ್ಚೆ ನಡೆದಿದೆ.

ತಿರುವನಂತಪುರ–ಕಾಸರಗೋಡು ಸೆಮಿ ಹೈಸ್ಪೀಡ್‌ ರೈಲು ಮಾರ್ಗ ಹಾಗೂ ಸಿಲ್ವರ್‌ ಮಾರ್ಗವನ್ನು ಮಂಗಳೂರಿನವರೆಗೂ ವಿಸ್ತರಿಸುವ ಸಂಬಂಧ ಕೇರಳ ಸರ್ಕಾರ ಸಿದ್ದಪಡಿಸಿರುವ ಪ್ರಸ್ತಾವನೆ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ತಿರುವನಂತಪುರದಲ್ಲಿ ಇತ್ತೀಚೆಗೆ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ದಕ್ಷಿಣ ವಲಯದ ಸಮಿತಿ ಸಭೆಯ ಮುಂದುವರಿದ ಭಾಗವಾಗಿ ಕೇರಳ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿದೆ.

- Advertisement -

Latest News

error: Content is protected !!