Thursday, June 4, 2026
Homeಕರಾವಳಿಬೆಳ್ತಂಗಡಿ: ಕಲ್ಮಂಜದ ವ್ಯಕ್ತಿಗೆ ಕೊರೋನಾ ಪಾಸಿಟಿವ್, ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ಮೇಲೆ ಸೋಂಕು...

ಬೆಳ್ತಂಗಡಿ: ಕಲ್ಮಂಜದ ವ್ಯಕ್ತಿಗೆ ಕೊರೋನಾ ಪಾಸಿಟಿವ್, ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ಮೇಲೆ ಸೋಂಕು ದೃಢ !

- Advertisement -
- Advertisement -

ಬೆಳ್ತಂಗಡಿ: ಕರಾವಳಿಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ತಾಲೂಕಿನ ಕಲ್ಮಂಜ ಗ್ರಾಮದ ಕುಕ್ಕೆಮಜಲು ಎಂಬಲ್ಲಿನ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

24 ದಿನಗಳ ಹಿಂದೆ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ, 14 ದಿನಗಳ ಸರಕಾರಿ ಕ್ವಾರಂಟೈನ್ ನ್ನು ಕಾರ್ಕಳದಲ್ಲಿ ಮುಗಿಸಿ, ಮನೆಗೆ ಆಗಮಿಸಿದ್ದರು. ಇಂದು ಅವರ ಕೋವಿಡ್19 ವರದಿ ಬಂದಿದ್ದು ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಕ್ಕೆಮಜಲು ಪರಿಸರ ಸೀಲ್ ಡೌನ್

ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಗೂ ಕಲ್ಮಂಜ ಗ್ರಾಮ ಪಂಚಾಯತಿ ಹಾಗೂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ತೆರಳಿ ಮನೆಯನ್ನು ಸೀಲ್ ಡೌನ್ ಮಾಡಿದ್ದು, 8 ಜನ ಮನೆಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

- Advertisement -

Latest News

error: Content is protected !!