Sunday, August 30, 2026
Homeತಾಜಾ ಸುದ್ದಿಮಹಿಳೆಯ ಹೊಟ್ಟೆಯಿಂದ ಬರೋಬ್ಬರಿ 55 ಬ್ಯಾಟರಿಗಳನ್ನು ಹೊರತೆಗೆದ ವೈದ್ಯರು

ಮಹಿಳೆಯ ಹೊಟ್ಟೆಯಿಂದ ಬರೋಬ್ಬರಿ 55 ಬ್ಯಾಟರಿಗಳನ್ನು ಹೊರತೆಗೆದ ವೈದ್ಯರು

- Advertisement -
- Advertisement -

ಐರ್ಲೆಂಡ್ :  ಕೆಲವೊಮ್ಮೆ ನಮ್ಮ ಸುತ್ತಮುತ್ತ ನಡೆಯುವ ವಿದ್ಯಾಮಾನಗಳನ್ನು ನೋಡಿದ್ರೆ ಅಯ್ಯೋ ಹೀಗೂ ಆಗುತ್ತಾ ಅನ್ನೋ ಅನುಮಾನ ಮೂಡುತ್ತೆ. ಅಂತಹದ್ದೇ ಘಟನೆಯೊಂದು ಐರ್ಲೆಂಡ್ ನಲ್ಲಿ ನಡೆದಿದೆ.

66 ವರ್ಷದ ಮಹಿಳೆಯೊಬ್ಬಳು ಉದ್ದೇಶಪೂರ್ವಕವಾಗಿಯೇ ತನಗೆ ತಾನು ಹಿಂಸೆ ಕೊಡುವ ನಿಟ್ಟಿನಲ್ಲಿ  55 ಬ್ಯಾಟರಿಗಳನ್ನು ನುಂಗಿದ್ದಾಳೆ. ಮಹಿಳೆ ಕೈಗೆ ಸಿಕ್ಕ ಬ್ಯಾಟರಿಗಳನ್ನೆಲ್ಲಾ ನುಂಗಿರುವುದಾಗಿ ತಿಳಿಸಿದ್ದಾಳೆ. ಆದರೆ ಎಷ್ಟು ಬ್ಯಾಟರಿಗಳನ್ನು ನುಂಗಿದ್ದಾಳೆ ಎಂಬ ಲೆಕ್ಕ ಆಕೆಯೂ ಇಟ್ಟುಕೊಂಡಿರಲಿಲ್ಲ. ಆಕೆ ಆಸ್ಪತ್ರೆಗೆ ದಾಖಲಾದ ಬಳಿಕ ಆಕೆಯ ಹೊಟ್ಟೆಯ ಭಾಗದ ಎಕ್ಸ್-ರೇ ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ ಹಾಗೂ ಕರುಳಿನಲ್ಲಿ ಹಲವು ಬ್ಯಾಟರಿಗಳು ಇರುವುದನ್ನು ನೋಡಿ ದಂಗಾಗಿದ್ದಾರೆ.

ಆರಂಭದಲ್ಲಿ ವೈದ್ಯರು ಮಹಿಳೆಯ ದೇಹದಿಂದ ಬ್ಯಾಟರಿಗಳನ್ನು ನೈಸರ್ಗಿಕವಾಗಿಯೇ ಹೊರ ಹಾಕಲು ಕಾದಿದ್ದಾರೆ. 1 ವಾರದ ಬಳಿಕ ಮತ್ತೆ ಸ್ಕ್ಯಾನ್ ಮಾಡಿ ನೋಡಿದಾಗ ಮತ್ತಷ್ಟು ಬ್ಯಾಟರಿಗಳು ಇದ್ದುದನ್ನು ನೋಡಿದ್ದಾರೆ. ಬ್ಯಾಟರಿಗಳ ತೂಕದಿಂದಾಗಿ ಆಕೆಯ ಹೊಟ್ಟೆ ಹಿಗ್ಗಿದ್ದು ಮಾತ್ರವಲ್ಲದೇ ಅವು ಗುದದ್ವಾರದ ಮೂಳೆಗಳಲ್ಲೂ ನೇತಾಡಿಕೊಂಡಿದ್ದವು ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಎಲ್ಲಾ ಬ್ಯಾಟರಿಗಳನ್ನೂ ತೆಗೆದುಹಾಕಿದ್ದಾರೆ.

ವೈದ್ಯರು ಶಸ್ತ್ರಚಿಕಿತ್ಸೆಯಲ್ಲಿ ಒಟ್ಟು 55 ಬ್ಯಾಟರಿಗಳನ್ನು ತೆಗೆದಿದ್ದು, ಇದು ಇಲ್ಲಿಯವರೆಗೆ ಶಸ್ತ್ರಚಿಕಿತ್ಸೆಯಲ್ಲಿ ಮನುಷ್ಯರ ಹೊಟ್ಟೆಯಿಂದ ತೆಗೆಯಲಾದ ಅತಿ ಹೆಚ್ಚು ಬ್ಯಾಟರಿಗಳು ಎಂದು ತಿಳಿಸಿದ್ದಾರೆ. ಮಾತ್ರವಲ್ಲದೇ ಆ ಬ್ಯಾಟರಿಗಳು ಆಕೆಯ ಜೀರ್ಣಕ್ರಿಯೆಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!