Friday, June 5, 2026
Homeತಾಜಾ ಸುದ್ದಿನಗರ ಸ್ಥಳೀಯ ಸಂಸ್ಥೆಗಳ ಹೊರ ‌ಗುತ್ತಿಗೆ ಪೌರಕಾರ್ಮಿಕರ ಖಾಯಂಗೆ ಸಚಿವ ಸಂಪುಟ ಒಪ್ಪಿಗೆ

ನಗರ ಸ್ಥಳೀಯ ಸಂಸ್ಥೆಗಳ ಹೊರ ‌ಗುತ್ತಿಗೆ ಪೌರಕಾರ್ಮಿಕರ ಖಾಯಂಗೆ ಸಚಿವ ಸಂಪುಟ ಒಪ್ಪಿಗೆ

- Advertisement -
- Advertisement -

ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ನೌಕರರು ಈಗ 17000-28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೌರ ಕಾರ್ಮಿಕರು ಇನ್ನು ಮುಂದೆ ಸರ್ಕಾರಿ ನೌಕರರೆಂದು ಪರಿಗಣಿಸಲ್ಪಡಲಿದ್ದಾರೆ.

ಬಿಬಿಎಂಪಿಯ 3673 ನೌಕರರು, ನಗರಸಭೆ ಮತ್ತು ಪುರಸಭೆಗಳಲ್ಲಿನ 5533, ಮಹಾನಗರ ಪಾಲಿಕೆಗಳಲ್ಲಿನ 1927 ಹೊರ ಗುತ್ತಿಗೆ ನೌಕರರ ಸೇವಾ ಖಾಯಮಾತಿ ಪಡೆಯಲಿದ್ದಾರೆ

- Advertisement -

Latest News

error: Content is protected !!