Thursday, June 4, 2026
Homeತಾಜಾ ಸುದ್ದಿಇದು ರಾಜ್ಯವೇ ತಲೆತಗ್ಗಿಸುವಂತಹ ಘಟನೆ:ಇಂತಹ ಮೌಢ್ಯಾಚರಣೆಗೆ ಕೊನೆ ಎಂದು?

ಇದು ರಾಜ್ಯವೇ ತಲೆತಗ್ಗಿಸುವಂತಹ ಘಟನೆ:ಇಂತಹ ಮೌಢ್ಯಾಚರಣೆಗೆ ಕೊನೆ ಎಂದು?

- Advertisement -
- Advertisement -

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ದಲಿತ ಯವಕನೊಬ್ಬ ದೇವರ ಮೆರವಣಿಗೆ ವೇಳೆ ಮೂರ್ತಿ ಮುಟ್ಟಿದನೆಂದು ಆ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿದ ಅಮಾನವೀಯ  ಘಟನೆ ನಡೆದಿದೆ. ಮಾಲೂರು ತಾಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ಈ ಅನಿಷ್ಟ ಘಟನೆ ನಡೆದಿದೆ.

ಗ್ರಾಮದ ಶೋಭಾ ಹಾಗೂ ರಮೇಶ್ ದಂಪತಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ದಂಡ ಹಾಕಲಾಗಿದೆ.
ಕಳೆದ 10 ದಿನಗಳ ಹಿಂದೆ ಗ್ರಾಮದ ಭೂತಮ್ಮ ದೇವರ ಮೂರ್ತಿ ಮೆರವಣಿಗೆ ವೇಳೆ 15 ವರ್ಷದ ಬಾಲಕ ಚೇತನ್ ದೇವರ ಉತ್ಸವ ಮೂರ್ತಿಗಳನ್ನ ಮುಟ್ಟಿದ್ದಾನೆ. ದಲಿತರು ಮೂರ್ತಿ ಮುಟ್ಟಿದ್ದಕ್ಕೆ ಮೈಲಿಗೆಯಾಗಿದೆ. ಮತ್ತೊಮ್ಮೆ ಬಣ್ಣ ಬಳಿಸಬೇಕು. ಹೀಗಾಗಿ ದಂಡ ಕಟ್ಟಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ದಂಡ ಕಟ್ಟಲು ಆಗದಿದ್ದರೆ, ಊರು ಬಿಟ್ಟು ಹೋಗುವಂತೆ ಎಚ್ಚರಿಕೆ ಕೊಟ್ಟಿದ್ದಾರೆ. ನೊಂದ ಕುಟುಂಬ ಮಾಸ್ತಿ ಪೊಲೀಸ್ ಠಾಣೆಯಲ್ಲಿ ವೆಂಕಟೇಶ್ ಹಾಗೂ ನಾರಾಯಣಸ್ವಾಮಿ ಸೇರಿದಂತೆ 8 ಮಂದಿಯ ವಿರುದ್ಧ ದೂರು ನೀಡಿದ್ದಾರೆ. ಆದರೆ ಗ್ರಾಮಸ್ಥರು ಆರೋಪ ತಳ್ಳಿ ಹಾಕಿದ್ದಾರೆ.

- Advertisement -

Latest News

error: Content is protected !!