Thursday, June 4, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಕ್ರೀಡಾ ಗ್ರಾಮ ಸ್ಥಾಪನೆಯ ಪ್ರಸ್ತಾವನೆ ಇಲ್ಲ: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ ಸ್ಪಷ್ಟನೆ

ಉಡುಪಿ ಜಿಲ್ಲೆಯಲ್ಲಿ ಕ್ರೀಡಾ ಗ್ರಾಮ ಸ್ಥಾಪನೆಯ ಪ್ರಸ್ತಾವನೆ ಇಲ್ಲ: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಕ್ರೀಡಾ ಗ್ರಾಮ ಸ್ಥಾಪನೆಯ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬೈಂದೂರು‌ ಶಾಸಕ ಬಿ.ಎಂ.‌ ಸುಕುಮಾರ‌‌ ಶೆಟ್ಟಿ ಕೇಳಿದ ಪ್ರಶ್ನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ ಉತ್ತರ ನೀಡಿದ್ದಾರೆ. ‌

ಉಡುಪಿ ಜಿಲ್ಲೆಯಲ್ಲಿ ಕ್ರೀಡಾ ಗ್ರಾಮ ನಿರ್ಮಾಣದ ಪ್ರಸ್ತಾವನೆ ಯಾವ ಹಂತದಲ್ಲಿದೆ ಎಂದು ಶಾಸಕ‌ ಸುಕುಮಾರ ಶೆಟ್ಟಿ ಪ್ರಶ್ನೆ ಕೇಳಿದ್ದರು.

ಇದೇ ವೇಳೆ ಬೈಂದೂರು ತಾಲೂಕು ಕ್ರೀಡಾಂಗಣವನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಮುಂದಾಗಿರುವ ಕಾರಣ ಬೈಂದೂರು ತಾಲೂಕಿನಲ್ಲಿ‌ ಪ್ರತ್ಯೇಕ ಒಳಾಂಗಣ ಮತ್ತು ಹೊರಾಂಗಣ ‌ಕ್ರೀಡಾಂಗಣ ಸ್ಥಾಪಿಸುವ ಉದ್ದೇಶ ಇಲ್ಲ ಎಂದು ಕ್ರೀಡಾ ಇಲಾಖೆ ಸ್ಪಷ್ಟಪಡಿಸಿದೆ.

- Advertisement -

Latest News

error: Content is protected !!