Sunday, September 27, 2026
Homeತಾಜಾ ಸುದ್ದಿಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ

ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ

- Advertisement -
- Advertisement -

ಕೊನದಾಸಪುರದಲ್ಲಿ ಬಿಡಿಎಯಿಂದ ಫ್ಲಾಟ್ ನಿರ್ಮಾಣದಲ್ಲಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ.

ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಲಾಗಿದೆ. ರಾಜ್ಯಪಾಲರ ಪೂರ್ವಾನುಮತಿ ಅಗತ್ಯ ಎಂದು ವಾದಿಸಿದ ಬಿ.ಎಸ್. ಯಡಿಯೂರಪ್ಪ ಪರ ವಕೀಲರು ಇಂದು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ್ದು, ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತನಿಖೆಗೆ ತಡೆ ಆದೇಶ ನೀಡಿದೆ. ‘ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇರಲಿಲ್ಲ. ಹಾಗಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಇದಕ್ಕೆ ತಡೆ ನೀಡಬೇಕು ಎಂದು ಯಡಿಯೂರಪ್ಪ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

- Advertisement -

Latest News

error: Content is protected !!