Saturday, June 6, 2026
Homeತಾಜಾ ಸುದ್ದಿಸಿಇಟಿ ರ಼್ಯಾಂಕಿಂಗ್ ಬಿಕ್ಕಟ್ಟು ಶಮನ: ಸೆ. 29ರಂದು ಪರಿಷ್ಕೃತ ರ಼್ಯಾಂಕಿಂಗ್ ಪ್ರಕಟ, ಅ. 3ರಿಂದ ಕೌನ್ಸೆಲಿಂಗ್...

ಸಿಇಟಿ ರ಼್ಯಾಂಕಿಂಗ್ ಬಿಕ್ಕಟ್ಟು ಶಮನ: ಸೆ. 29ರಂದು ಪರಿಷ್ಕೃತ ರ಼್ಯಾಂಕಿಂಗ್ ಪ್ರಕಟ, ಅ. 3ರಿಂದ ಕೌನ್ಸೆಲಿಂಗ್ ಆರಂಭ

- Advertisement -
- Advertisement -

ಬೆಂಗಳೂರು: ವೃತಿಪರ ಕೋರ್ಸ್ ಗಳ ಸಿಇಟಿ ರಾಂಕಿಂಗ್ ಗೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ.

ಪರಿಷ್ಕೃತ ಸಿಇಟಿ ರಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಜತೆಗೆ ಅಕ್ಟೋಬರ್‌ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರ಼್ಯಾಂಕಿಂಗ್ ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು.

ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು.

ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿದೆ.

- Advertisement -

Latest News

error: Content is protected !!