Friday, August 28, 2026
Homeಕರಾವಳಿಉಡುಪಿಉಡುಪಿಯ ಹೂಡೆ ಬೀಚ್ ನಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವು, ಓರ್ವ ನಾಪತ್ತೆ

ಉಡುಪಿಯ ಹೂಡೆ ಬೀಚ್ ನಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವು, ಓರ್ವ ನಾಪತ್ತೆ

- Advertisement -
- Advertisement -

ಉಡುಪಿ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿದ ಇಬ್ಬರು ಸಾವನ್ನಪ್ಪಿ, ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮಣಿಪಾಲದ ಎಂಐಟಿ ಎಂಜಿನಿಯರಿಂಗ್ ಕಾಲೇಜಿನ ಸುಮಾರು 15 ಮಂದಿ ವಿದ್ಯಾರ್ಥಿಗಳು ಹೂಡೆ ಬೀಚ್‌ನಲ್ಲಿ ವಿಹಾರಕ್ಕೆಂದು ಬಂದಿದ್ದರು. ಅಲ್ಲಿ ಕೆಲವರು ಸಮುದ್ರದ ನೀರಿನಲ್ಲಿ ಆಡುತ್ತಿದ್ದ ವೇಳೆ ಮೂವರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅದರಲ್ಲಿ ಇಬ್ಬರನ್ನು ರಕ್ಷಿಸಿ ಮೇಲಕ್ಕೆ ತರಲಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಮಣಿಪಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಇನ್ನೋರ್ವ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ

ನಿಶಾಂತ್ ಹಾಗೂ ಷಣ್ಮುಖ ಮೃತ ವಿದ್ಯಾರ್ಥಿಗಳು. ಇನ್ನೋರ್ವ ವಿದ್ಯಾರ್ಥಿ ಶ್ರೀಕರ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಮಲ್ಪೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

- Advertisement -

Latest News

error: Content is protected !!