Thursday, June 4, 2026
Homeತಾಜಾ ಸುದ್ದಿಮಾಜಿ ಸಿಎಂ ಎಸ್.ಆರ್. ಕಂಠಿ ಪುತ್ಥಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಲಾರ್ಪಣೆ

ಮಾಜಿ ಸಿಎಂ ಎಸ್.ಆರ್. ಕಂಠಿ ಪುತ್ಥಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಲಾರ್ಪಣೆ

- Advertisement -
- Advertisement -

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಇಳಕಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.‌ ಆರ್.‌ ಕಂಠಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಇದೇ ವೇಳೆ ಇಳಕಲ್ ನಗರದಲ್ಲಿ ಜಗಜ್ಯೋತಿ ಬಸವಣ್ಣ ಪ್ರತಿಮೆಗೂ ಮಾಲಾರ್ಪಣೆ ಮಾಡಿ ನಳೀನ್ ಕುಮಾರ್ ಕಟೀಲ್ ನಮನ ಸಲ್ಲಿಸಿದರು.

ಈ ಮಧ್ಯೆ ಇಳಕಲ್‌ನಲ್ಲಿ ನೇಕಾರ ಸಮುದಾಯದ ಪ್ರಮುಖರಾದ ನಾಗೇಶ್ ಅವರ ಮನೆಯಲ್ಲಿ ನೇಕಾರಿಕೆಯನ್ನು ವೀಕ್ಷಿಸಿದ ನಳೀನ್ ಕುಮಾರ್ ಕಟೀಲ್, ಎಸ್‌ಸಿ, ಎಸ್‌ಟಿ ಮತ್ತು ಓಬಿಸಿ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ಶಾಂತವೀರ ಗೌಡ ಪಾಟೀಲ್, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!