Wednesday, June 3, 2026
Homeಕರಾವಳಿದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀ

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀ

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರನ್ನು ಇಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿ ಆರೋಗ್ಯ ವಿಚಾರಿಸಿದರು.

ದೇವೇಗೌಡರ ಜೊತೆ ಕೆಲವು ಹೊತ್ತು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತುಕತೆಯನ್ನೂ ನಡೆಸಿದರು. ದೇವೇಗೌಡರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹಲವು ರಾಜಕೀಯ ನಾಯಕರು ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ಕಳೆದ ವಾರ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಸೇರಿದಂತೆ ಸಚಿವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!