Monday, June 8, 2026
Homeಕರಾವಳಿಪುತ್ತೂರು: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ಹಚ್ಚಿದ ಪ್ರಕರಣ; ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ...

ಪುತ್ತೂರು: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ಹಚ್ಚಿದ ಪ್ರಕರಣ; ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿತನಾಗಿ, ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮಂಗಳೂರು ತಾಲೂಕಿನ ಪಚ್ಚನಾಡಿ ವೈದ್ಯನಾಥನಗರ ನಿವಾಸಿ ರಮೇಶ್ ಬಂಧಿತ ಆರೋಪಿ.ಈತ ಪುತ್ತೂರಿನಲ್ಲಿ ತನ್ನ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ಹಚ್ಚಿದ್ದ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿದ್ದಯ. ಆದರೆ ನ್ಯಾಯಾಲಯದಲ್ಲಿ ಜಾಮೀನು ಪಡೆದು ನಂತಕ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇದೀಗ ಆತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!