Thursday, June 4, 2026
Homeಕರಾವಳಿಮಂಗಳೂರು: ಖಾಸಗಿ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿ ಲಾಡ್ಜ್ ನಲ್ಲಿ ಆತ್ಮಹತ್ಯೆ

ಮಂಗಳೂರು: ಖಾಸಗಿ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿ ಲಾಡ್ಜ್ ನಲ್ಲಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು; ನಗರದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಮದುವೆಯಾಗಿದ್ದು,‌ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿ, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!