Thursday, June 4, 2026
Homeಕರಾವಳಿಸಾಮರಸ್ಯ ಕದಡುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು: ಮಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ....

ಸಾಮರಸ್ಯ ಕದಡುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು: ಮಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಹೇಳಿಕೆ.

- Advertisement -
- Advertisement -

ಮಂಗಳೂರು: ರಾಷ್ಟ್ರದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕದಡುವ ಯಾವುದೇ ಸಂಘಟನೆ ವಿರುದ್ದ ಕ್ರಮ ಆಗಬೇಕು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಹೇಳಿದ್ದಾರೆ.

ಪಿಎಫ್ ಐ ಸಂಘಟನೆ ನಿಷೇಧ ವಿಚಾರವಾಗಿ ಮಂಗಳೂರಿನಲ್ಲಿ ಇಂದು ಮಾತನಾಡಿದ ಖಾದರ್, ಇದು ಸರ್ಕಾರದ ಜವಾಬ್ದಾರಿಯಾಗಿದ್ದು, ಎಲ್ಲಾ ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಆಗಲಿ, ಯಾವುದೇ ತಾರತಮ್ಯ ಮಾಡದೇ ಸದುದ್ದೇಶದಿಂದ ಕ್ರಮ ಆಗಲಿ ಎಂದು ಹೇಳಿದ್ದಾರೆ.

ಅಲ್ಲದೇ ಭವಿಷ್ಯದಲ್ಲಿ ಸಮಾಜದಲ್ಲಿ ಅಶಾಂತಿ ಕಡಿಮೆಯಾಗಬೇಕು,
ಉತ್ತಮ ಸಮಾಜವನ್ನು ನಿರ್ಮಾಣ ‌ಮಾಡಲು ಕ್ರಮಗಳು ಅಗತ್ಯ ಎಂದು ಯು.ಟಿ. ಖಾದರ್ ಹೇಳಿದ್ದಾರೆ.

ಸಮಾಜವನ್ನು ಒಡೆಯುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು ಮತ್ತು ಈ ವಿಚಾರದಲ್ಲಿ ಸರ್ಕಾರ ಸಮಾನತೆಯ ಕ್ರಮ ತೆಗೆದುಕೊಳ್ಳಬೇಕು ಎಂದು ಖಾದರ್ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!