Sunday, June 7, 2026
Homeಕೊಡಗುಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕತ್ತಿಯಿಂದ ಹಲ್ಲೆ ಆರೋಪ

ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕತ್ತಿಯಿಂದ ಹಲ್ಲೆ ಆರೋಪ

- Advertisement -
- Advertisement -

ಕೊಡಗು : ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ. ರಾಜಕೀಯ ದ್ವೇಷದ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜಕೀಯ ದ್ವೇಷದ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತ ಪ್ರಭುಶೇಖರ-ಹೊಸ್ಕೇರಿ ಗ್ರಾ.ಪಂ.ಅಧ್ಯಕ್ಷ , ಬಿಜೆಪಿ ಕಾರ್ಯಕರ್ತ ತಾಲೂಕು ಪಂಚಾಯಿತಿ ಮಾಜಿ ಸದಸ್ಯನಾಗಿರುವ ಅಪ್ಪು ರವೀಂದ್ರ ಸೋದರರು ನಡುವೆಯೇ ಗಲಾಟೆ ತೀವ್ರಗೊಂಡು ಹಲ್ಲೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಯಶ್‌ ದೋಲ್ಪಾಡಿ, ಖಜಾಂಜಿ ಚಂದನ್‌ಗೆ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೋದರರಾದ ಪ್ರಭುಶೇಖರ, ಆನಂದ್‌, ರಘು , ರವೀಂದ್ರರಿಂದ ಹಲ್ಲೆಗೈಯ್ಯಲಾಗಿದೆ ಎನ್ನಲಾಗಿದೆ.

ಕತ್ತಿಯಿಂದ ಹಲ್ಲೆ ನಡೆಸಿದ ಸೋದರರು ತಲೆಮರೆಸಿಕೊಂಡಿದ್ದಾರೆ. ಮೂವರು ಸಹೋದರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!