Thursday, June 4, 2026
Homeತಾಜಾ ಸುದ್ದಿಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಶಾಕ್ ಕೊಟ್ಟ ಸಿಬಿಐ ಅಧಿಕಾರಿಗಳು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಶಾಕ್ ಕೊಟ್ಟ ಸಿಬಿಐ ಅಧಿಕಾರಿಗಳು

- Advertisement -
- Advertisement -

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅವರ  ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ. ದಾಖಲೆಗಳನ್ನು ಪರಿಶೀಲನೆ‌ ನಡೆಸಿದ್ದಾರೆ.

- Advertisement -

Latest News

error: Content is protected !!