- Advertisement -
- Advertisement -
ಉಡುಪಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿಗಳನ್ನು ಪೊಲೀಸರು ತಪಾಸಣೆ ಮಾಡಿದ್ದಾರೆ. ಪಿಎಫ್ಐ ಕಚೇರಿಗೆ ಸೇರಿದ ದಾಖಲೆ, ಪೀಠೋಪಕರಣ ಜಪ್ತಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಹೂಡೆ ಮತ್ತು ಗಂಗೊಳ್ಳಿಯಲ್ಲಿರುವ ಎಸ್ಡಿಪಿಐ ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ. ಎಸ್ಡಿಪಿಐ ಮುಖಂಡರಾದ ಬಶೀರ್, ನಜೀರ್ ಮನೆಗಳನ್ನು ಪರಿಶೀಲಿಸಲು ಪೊಲೀಸರು ಮುಂದಾದರು. ಆದರೆ ಮನೆಗಳಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.
- Advertisement -