- Advertisement -
- Advertisement -
ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ಕಂಡು ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ ಐ ಭಯೋತ್ಪಾದಕ ಚಟುವಟಿಕೆಗಳು, ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಪಿಎಫ್ ಐ ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ. ಪಿಎಫ್ ಐ ಪರ ಮಾತನಾಡಿದ್ರೆ ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತೆ ಎಂಬುದು ಕಾಂಗ್ರೆಸ್ ಗೆ ಚಿಂತೆಯಾಗಿದೆ ಎಂದು ಜೋಶಿ ಹೇಳಿದ್ದಾರೆ..
- Advertisement -