Thursday, June 4, 2026
Homeತಾಜಾ ಸುದ್ದಿಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ. ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ. ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

- Advertisement -
- Advertisement -

ಹಾವೇರಿ: ಗಂಟುರೋಗದಿಂದ ದನಗಳು ಮೃತಪಟ್ಟರೆ ಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುವ ವೇಳೆ ಈ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ಗ್ರಾಮೀಣ ಭಾಗದಲ್ಲಿ ವಿದ್ಯುಚ್ಛಕ್ತಿ ಸರಬರಾಜು ಐದು ಗಂಟೆಗಳ ಕಾಲವಿದ್ದು ಇದನ್ನು ಏಳು ಗಂಟೆಗಳಿಗೆ ವಿಸ್ತರಿಸಬೇಕು ಎಂಬ ರೈತರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದ ಸಿಎಂ, ಈ ಬಗ್ಗೆ ಕೂಡಲೇ ಆದೇಶ ಹೊರಡಿಸಲಾಗುವುದು ತಿಳಿಸಿದ್ದಾರೆ.

ಅಲ್ಲದೇ ವಿದ್ಯುತ್ ಸಂಸ್ಥೆಗಳ ಖಾಸಗೀಕರಣವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ‌ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!