- Advertisement -
- Advertisement -
ಬೆಳ್ತಂಗಡಿ: ರಾಷ್ಟ್ರಮಟ್ಟದ 33 ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಡಿಸ್ಕಸ್ ಥ್ರೋ ಸ್ಪರ್ದೆಯಲ್ಲಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪದವಿ ವಿದ್ಯಾರ್ಥಿನಿ ಸುಷ್ಮಾ ಬಿ. ಪೂಜಾರಿ ಯೈಕುರಿ ಚತುರ್ಥ ಸ್ಥಾನ ಪಡೆದಿದ್ದಾರೆ.
ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಆಂಧ್ರಪ್ರದೇಶದ ಗುಂಟೂರಿನಲ್ಲಿ ಜರುಗಿತ್ತು.
ಸುಷ್ಮಾ ಪೂಜಾರಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಕಿ 3 ಬಾರಿ ರಾಷ್ಟ್ರ ಮಟ್ಟಕ್ಕೆ, 12 ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಹಲವಾರು ಪ್ರಶಸ್ತಿ ಪಡೆದಿದ್ದಾರೆ.
ಸುಷ್ಮಾ, ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದ ನಿವಾಸಿ, ಬಳಂಜ ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಪೂಜಾರಿ ಮತ್ತು ಮಾಲತಿ ಬಿ. ಪೂಜಾರಿ ಯೈಕುರಿ ಇವರ ಪುತ್ರಿಯಾಗಿದ್ದಾರೆ.
- Advertisement -